ಕರಾವಳಿಯಲ್ಲಿ ನ. 5ರ ವರೆಗೂ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್‌ ಘೋಷಣೆ

Prasthutha|

ಮಂಗಳೂರು: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನ. 5ರ ವರೆಗೂ ಭಾರಿ ಮಳೆ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

- Advertisement -

ಈ ಕುರಿತು ಮಾಹಿತಿ ನೀಡಿದ ಭಾರತೀಯ ಹವಾಮಾನ ಇಲಾಖೆ ಮುಂದಿನ ಮೂರು- ನಾಲ್ಕು ದಿನ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಹಿಂಗಾರು ಚುರುಕುಗೊಂಡಿದ್ದು, ದ.ಕ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ.

Join Whatsapp