ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮಂಗಳೂರಿನಲ್ಲಿ ಇಳಿಯಬೇಕಿದ್ದ ದುಬೈ ವಿಮಾನವನ್ನು ಕೊಚ್ಚಿ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ.
ದುಬೈನಿಂದ ಮಂಗಳೂರಿಗೆ ಬಂದಿದ್ದ ಸ್ಪೈಸ್ ಜೆಟ್ ವಿಮಾನ ರಾತ್ರಿ 9.30ಕ್ಕೆ ಮಂಗಳೂರು ತಲುಪಿದ್ದು, ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಮಾಡಲು ಸಾಧ್ಯವಾಗಿಲ್ಲ.
ಇಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ಸತತ ನಾಲ್ಕು ದಿನಗಳಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಎಚ್ಚರಿಕೆಯು ಭಾನುವಾರ ಬೆಳಗ್ಗೆವರೆಗೆ ಇರಲಿದೆ. ಮಂಗಳವಾರದಿಂದ ಇಂದಿನವರೆಗೆ ಶಾಲಾ ಕಾಲೇಜುಗೆ ರಜೆ ನೀಡಲಾಗಿದೆ.