ಕರಾವಳಿಯಲ್ಲಿ ಮುಂದಿನ 3 ದಿನ ಭಾರೀ ಮಳೆ: ರೆಡ್ ಅಲರ್ಟ್​ ಘೋಷಣೆ

Prasthutha|

- Advertisement -

ಮಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆ ಜೋರಾಗಲಿದ್ದು, 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

- Advertisement -

ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಿದೆ.



Join Whatsapp