ಬೆಂಗಳೂರಿನಲ್ಲಿ ಭಾರೀ ಮಳೆ; ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಬೆಂಗಳೂರಿಗೆ ಪ್ರವಾಸಕ್ಕೆ ಬಂದು ಮಳೆಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.



Join Whatsapp