Home ಟಾಪ್ ಸುದ್ದಿಗಳು ಬೆಂಗಳೂರಿನಲ್ಲಿ ಭಾರಿ ಮಳೆ: ಮಧ್ಯರಾತ್ರಿ BBMP ವಾರ್ ರೂಂಗೆ ಡಿಸಿಎಂ ಭೇಟಿ

ಬೆಂಗಳೂರಿನಲ್ಲಿ ಭಾರಿ ಮಳೆ: ಮಧ್ಯರಾತ್ರಿ BBMP ವಾರ್ ರೂಂಗೆ ಡಿಸಿಎಂ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಇಡೀ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಡೀ ನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆ ಪರಿಸ್ಥಿತಿಯ ಮಾಹಿತಿ ಪಡೆಯಲು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬಿಬಿಎಂಪಿ ವಾರ್ ರೂಂಗೆ ಭೇಟಿ ನೀಡಿದ್ದರು.


ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹಡ್ಸನ್ ವೃತ್ತದ ಬಿಬಿಎಂಪಿ ಕೇಂದ್ರ ಕಚೇರಿಯ ವಾರ್ ರೂಂಗೆ ಮಧ್ಯರಾತ್ರಿ ಹಠಾತ್ ಭೇಟಿ ನೀಡಿ, ಬೆಂಗಳೂರಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಗರದ ಪರಿಸ್ಥಿತಿ, ಅನಾಹುತ, ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ನಗರದ ವಿವಿದೆಡೆಯಿಂದ ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳ ಮಾಹಿತಿ ಪಡೆದ ಅವರು, ತಕ್ಷಣ ನಾಗರಿಕರ ಸಮಸ್ಯೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Join Whatsapp
Exit mobile version