►ಕರಾವಳಿ ಸೇರಿ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
- Advertisement -
ಮಂಗಳೂರು: ಕಡಬ, ಸುಳ್ಯ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜು.3ರ ಗುರುವಾರ ರಜೆ ಘೋಷಿಸಲಾಗಿದೆ.
ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕುಗಳ ತಹಶೀಲ್ದಾರರು ಆದೇಶಿಸಿದ್ದಾರೆ.
- Advertisement -
ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗೃತೆ ವಹಿಸಲು ಸೂಚಿಸಿದೆ.
ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.