ಭಾರೀ ಮಳೆಯಿಂದ ಜಲಾವೃತಗೊಂಡ ದೆಹಲಿ ವಿಮಾನ ನಿಲ್ದಾಣ!

Prasthutha|

ಹೊಸದಿಲ್ಲಿ:  ಭಾರೀ ಮಳೆಯಿಂದಾಗಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇಂದಿರಾಗಾಂಧಿ ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಶುಕ್ರವಾರ ದೆಹಲಿಯಲ್ಲಿ ದಾಖಲೆ ಪ್ರಮಾಣದ 1,000 ಮಿಲಿ ಮೀಟರ್ ಮಳೆಯಾಗಿದ್ದು, ಇದು ಕಳೆದ 46 ವರ್ಷಗಳ ಬಳಿಕ ಸುರಿದ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

 ಹವಾಮಾನ ವೈಪರೀತ್ಯದಿಂದ ವಿಮಾನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಭಾರೀ ಮಳೆಯ ಪರಿಣಾಮ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಇಂಡಿಗೋ, ಸ್ಪೈಸ್ ಜೆಟ್ ವಿಮಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿಮಾನ ನಿಲ್ದಾಣದ ಅಧಿಕಾರಿಗಳು, ಆಕಸ್ಮಿಕವಾಗಿ ಸುರಿದ ಭಾರೀ ಮಳೆಯ ಪರಿಣಾಮ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ನಮ್ಮ ತಂಡ ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು, ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ತಿಳಿಸಿದ್ದಾರೆ.

Join Whatsapp