ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಮುಂಜಾನೆಯಿಂದ ಭಾರೀ ಮಳೆಯಾಗಿದ್ದು ರಾಷ್ಟ್ರೀಯ ಹೆದ್ದಾರಿ 73 ನೇ ಪಡೀಲು ಹೈವೇ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಇಂದು ಬೆಳಗ್ಗಿನಿಂದಲೇ ಭಾರಿ ಮಳೆ ಸುರಿಯುತ್ತಿದ್ದು, ಓವರ್ ಬ್ರಿಡ್ಜ್ ಒಳಗಡೆ ಸಂಪೂರ್ಣ ನೀರು ನಿಂತಿದೆ. ಪಡೀಲು ಓವರ್ ಬ್ರಿಡ್ಜ್ ನ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಈ ಹಿಂದೆಯೂ ಹಲವು ಬಾರಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸ್ಥಳೀಯರು ಅಧಿಕಾರಿಗಳಿಗೆ ಛೀಮಾರಿ ಹಾಕುತ್ತಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಜಿಲ್ಲಾಧಿಕಾರಿಗಳು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.