ಸಕಲೇಶಪುರದಲ್ಲಿ ಭಾರೀ ಮಳೆ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮಣ್ಣಿನ ರಾಶಿ

Prasthutha|

►ಶಿರಾಡಿಘಾಟ್’ನಲ್ಲಿ ವಾಹನ ಸಂಚಾರ ಬಂದ್

- Advertisement -

ಸಕಲೇಶಪುರ: ಹಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಭೂಕುಸಿತ ಸಂಭವಿಸಿರುವ ಘಟನೆಗಳು ವರದಿಯಾಗಿವೆ.

ದೊಡ್ಡತಪ್ಲು ಗ್ರಾಮದ ಬಳಿ ಗುಡ್ಡ ಕುಸಿದು, ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣಿನ ರಾಶಿ ಬಿದ್ದಿದ್ದು, ಕಾರಿನ ಒಳಗಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ‌. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿಯ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಭೂಕುಸಿತದಿಂದ ಕಿಲೋಮೀಟರ್ ಟ್ರಾಫಿಕ್ ಜಾಮ್ ಆಗಿದೆ.



Join Whatsapp