ಆ.1ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

Prasthutha|

ಬೆಂಗಳೂರು: ಆ.1ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಜುಲೈ 24ರಿಂದ ಆ.1ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಕೊಪ್ಪ, ಕಳಸ, ನರಸಿಂಹರಾಜಪುರ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸೇರಿ ಹಲವು ಕಡೆ ಜು. 16ರಿಂದ 24ರವರೆಗಿನ ಅವಧಿಯಲ್ಲಿ 150 ಮಿ.ಮೀ.ನಷ್ಟು ಮಳೆಯಾಗಬಹುದು ಎಂದು ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.



Join Whatsapp