ಜಡಿಮಳೆಗೆ ಕೊಡಗು ಜಿಲ್ಲೆ ಹೈರಾಣ: ಹಲವೆಡೆ ಮತ್ತೆ ಜಲದಿಗ್ಬಂಧನ

Prasthutha|

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಸೋಮವಾರವೂ ಮುಂದುವರಿದಿದ್ದು, ಕಾವೇರಿ, ಹಾರಂಗಿ, ಲಕ್ಷ್ಮಣ ತೀರ್ಥ ಸೇರಿದಂತೆ ಜಿಲ್ಲೆಯ ಬಹುತೇಕ ನದಿ ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಹರಿಯುತ್ತಿರುವ ಹೊಳೆಗಳು ಕೂಡಾ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವು ಗ್ರಾಮಗಳು ಜಲದಿಗ್ಬಂಧನಕ್ಕೆ ಒಳಗಾಗಿವೆ. ಮಳೆಯೊಂದಿಗೆ ಮೈ ಕೊರೆಯುವ ಚಳಿಯೂ ಇದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.

- Advertisement -

ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೊಂಡಂಗೇರಿ ಭಾಗದ ನದಿ ನೀರಿನಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಪ್ರವಾಹ ಭೀತಿ ಎದುರಾಗಿರುವ ಹಿನ್ನೆಲೆ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಪರ್ಯಾಯ ವ್ಯವಸ್ಥೆ ಮಾಡುವ ಸಲುವಾಗಿ ಕಂದಾಯ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತಿ ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕೃತಿ ವಿಕೋಪ ಸಂಬಂಧ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲೆಯ ಕಾಳಜಿ ಕೇಂದ್ರಗಳಿಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಂಬೂರು ವ್ಯಾಪ್ತಿಯಲ್ಲಿ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಬೆಳೆಗಳು ನಾಶವಾಗುತ್ತಿದ್ದು, ರೈತರು ನಷ್ಟ ಅನುಭವಿಸುವಂತಾಗಿದೆ

- Advertisement -

ಜಿಲ್ಲೆಯ ವಿವಿಧೆಡೆ ಮಳೆಹಾನಿ ಸ್ಥಳಗಳಿಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ  ಭೇಟಿ ನೀಡುವ ಸಾಧ್ಯತೆ ಇದೆ. ಜಿಲ್ಲಾ ಉಸ್ತುವಾರಿ  ಸಚಿವರ ಜೊತೆ   ಭೂಕುಸಿತ ,ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ಥರೊಂದಿಗೆ ಬೊಮ್ಮಾಯಿ ಚರ್ಚಿಸಲಿದ್ದಾರೆ.

Join Whatsapp