ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಬಿರುಸಿನ ಮಳೆ ಪ್ರಮಾಣದಲ್ಲಿ ಇಳಿಮುಖವಾಗಿದೆ.
ಸೋಮವಾರ ಹಾಗೂ ಮಂಗಳವಾರ ಬೆಳಗ್ಗೆಯವರೆಗೆ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು ಕರಾವಳಿಯ ಜನ ಕೊಂಚ ನಿಟ್ಟುಸಿರು ಬಿಡುವಂತಾಗಿದೆ.
ಕರಾವಳಿಯಲ್ಲಿ ಈ ಹಿಂದೆ ಘೋಷಿಸಲಾಗಿದ್ದ ರೆಡ್ ಅಲರ್ಟ್ ಮಂಗಳವಾರದಿಂದ ಆರೆಂಜ್ ಅಲರ್ಟ್ ಆಗಿ ಪರಿವರ್ತನೆಗೊಂಡಿವೆ. ಆರೆಂಜ್ ಅಲರ್ಟ್ ಶನಿವಾರ ಮುಂಜಾನೆವರೆಗೂ ಮುಂದುವರಿಯಲಿದೆ. ಹಾಗಾಗಿ ಮಳೆ ಒಂದಷ್ಟು ತಗ್ಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.