ಕರಾವಳಿ ಕರ್ನಾಟಕ ಭಾಗದಲ್ಲಿ ಇಂದು ಮತ್ತು ನಾಳೆ ಭರ್ಜರಿ ಮಳೆ

Prasthutha|

ಮಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಇಂದು ಮತ್ತು ನಾಳೆ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿಯ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದೆ.

- Advertisement -

ಈಗಾಗಲೇ ಕಳೆದ ಹಲವು ದಿನಗಳಿಂದಲೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಮತ್ತೆ ಮಳೆ ಅಬ್ಬರಿಸುತ್ತಿದೆ. ಹಾಗೇ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಆರ್ಭಟಿಸುವ ಮುನ್ಸೂಚನೆಯು ಸಿಗುತ್ತಿದೆ.

ಕೃಷ್ಣಾ & ಭೀಮಾ ನದಿಗಳ ಆರ್ಭಟ!

- Advertisement -

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು & ಶಿವಮೊಗ್ಗ ಜಿಲ್ಲೆಗಳು ಹೊರತುಪಡಿಸಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿ ರಾಮನಗರ ಹಾಗೂ ಚಾಮರಾಜನಗರ, ತುಮಕೂರು, ದಾವಣಗೆರೆ ಜಿಲ್ಲೆ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹಾಗೇ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ಮಳೆರಾಯ ಅಬ್ಬರಿಸುವುದು ಗ್ಯಾರಂಟಿ. ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶ, ಭೀಮಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.

Join Whatsapp