ಮೇ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

Prasthutha|

ಬೆಂಗಳೂರು: ತೌಖ್ತೆ ಚಂಡಮಾರುತದ ಪರಿಣಾಮ ಮೇ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ತೌಖ್ತೆ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮೇ 20ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಅಲ್ಲದೆ, ಒಳನಾಡಿನಲ್ಲೂ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 16ರಂದು ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ. ಈ ಚಂಡಮಾರುತ ರಾಜ್ಯದ ಕರಾವಳಿಯನ್ನು ದಾಟಿ ಮೇ 18ರಂದು ಗುಜರಾತ್‌ ಕರಾವಳಿ ತಲುಪಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ಈ ಸಂದರ್ಭದಲ್ಲೇ ತೌಖ್ತೆ ಚಂಡಮಾರುತ ಬಂದೆರಗಿದ್ದು, ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರ ಸೇರಿದಂತೆ ಐದು ರಾಜ್ಯಗಳಲ್ಲಿ ಈ ಚಂಡಮಾರುತದ ಪರಿಣಾಮ ಹೆಚ್ಚಾಗಿದೆ ಎನ್ನಲಾಗಿದೆ.



Join Whatsapp