ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಬಿರುಸು ಪಡೆದುಕೊಂಡಿದ್ದು, ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆಯಿಂದ ಧಾರಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು, ತರೀಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ ಭಾಗದಲ್ಲಿ ಮಳೆ ಬೀಳುತ್ತಿದ್ದು, ಜಿಲ್ಲೆಯ ಬೆಳೆಗಳಾದ ಕಾಫಿ, ಭತ್ತ, ಶುಂಠಿ, ಕಾಳು ಮೆಣಸು, ಜೋಳ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕೆಯಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.