Home ಟಾಪ್ ಸುದ್ದಿಗಳು ಭಾರಿ ಮಳೆ: ಬೆಂಗಳೂರು ನಗರದ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ

ಭಾರಿ ಮಳೆ: ಬೆಂಗಳೂರು ನಗರದ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ.

ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು (ಅ. 21, ಸೋಮವಾರ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ, ಎಲ್​​​​ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ.

Join Whatsapp
Exit mobile version