ಬೆಂಗಳೂರಿನಲ್ಲಿ ಮುಂದುವರೆದ ಮಳೆ: ರಸ್ತೆಗಳು ಜಲಾವೃತ

Prasthutha|

ಬೆಂಗಳೂರು: ನಗರದಲ್ಲಿ ನಾಲ್ಕು ದಿನದಿಂದ ಬಿಟ್ಟು ಬಿಡದಂತೆ ಸುರಿಯುತ್ತಿರುವ ಮಳೆ ಮತ್ತೆ ಮುಂದುವರೆದಿದೆ.

- Advertisement -


ಹಲವೆಡೆ ಸುರಿಯುತ್ತಿರುವ ಭಾರೀ ಮಳೆಗೆ ಮಲ್ಲೇಶ್ವರಂನ ಹಳ್ಳಿ ಮನೆ ಮುಂದೆ ಬೃಹದಾಕಾರ ಮರ ಧರೆಗುರುಳಿದು ಅವಾಂತರ ಸೃಷ್ಟಿಯಾಗಿದೆ.


ವಿಧಾನಸೌಧ, ಕೆ.ಆರ್.ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್ ಶಾಂತಿನಗರ ಮತ್ತು ರಿಚ್ಮಂಡ್ ಸರ್ಕಲ್, ಡಾಲರ್ಸ್ ಕಾಲೋನಿ, ಹೆಬ್ಬಾಳ, ಸಂಜಯ್ ನಗರ, ಬಿಇಎಲ್ ರೋಡ್, ಎಂಎಸ್ ರಾಮಯ್ಯ ಆಸ್ಪತ್ರೆ ಸೇರಿದಂತೆ ಹಲವೆಡೆ ಭಾರೀ ಮಳೆ ಆಗಿದೆ. ಕೆಂಗೀರಿ ಸುತ್ತಮುತ್ತ ಜಿಟಿ ಜಿಟಿ ಮಳೆ ಆರಂಭವಾಗಿದ್ದರೆ, ಜಯನಗರ 7ನೇ ಹಂತದಲ್ಲಿ ಸುಮಾರು 30 ನಿಮಿಷದಿಂದ ಜೋರು ಗಾಳಿ ಜೊತೆಗೆ ಧಾರಾಕಾರ ಮಳೆ ಸುರಿಯುತ್ತಿದೆ.

- Advertisement -


ಧಾರಾಕಾರ ಮಳೆಗೆ ಮ್ಯಾನ್ ಹೋಲ್ ಓಪನ್ ಆಗಿ ನೀರು ಉಕ್ಕಿ ಹರಿದಿದೆ. ಪರಿಣಾಮ ಶಾಂತಿನಗರದ ಬಿಟಿಎಸ್ ರಸ್ತೆ ಕೆಸರು ಮಯವಾಗಿದೆ. ನೀರು ತುಬಿಕೊಂಡ ಹಿನ್ನಲೆ ಗುಂಡಿಗಳು ಕಾಣದಂತಾಗಿದ್ದು, ಬೈಕ್ ಸವಾರರು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.



Join Whatsapp