ವ್ಯಾಪಕ ಮಳೆ: ಜಿಲ್ಲಾಧಿಕಾರಿಗಳಿಂದ ಮಂಗಳೂರು ನಗರ ಪ್ರದಕ್ಷಿಣೆ

Prasthutha|

ಮಂಗಳೂರು: ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು (ಜು. 5ರ ಬುಧವಾರ) ಮಂಗಳೂರು ನಗರ ಪ್ರದಕ್ಷಿಣೆ ಕೈಗೊಂಡಿದ್ದರು.

- Advertisement -

ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಿದರು.

 ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಇದ್ದರು.



Join Whatsapp