ಚೆನ್ನೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

Prasthutha|

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ.

- Advertisement -


ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಜೆ ಘೋಷಿಸಿದ್ದಾರೆ.


ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

- Advertisement -


ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ. ಈ ಜಿಲ್ಲೆಗಳ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಅಕ್ಟೋಬರ್ 15 ರಿಂದ 18ರವರೆಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಸಲಹೆಯನ್ನು ನೀಡುವಂತೆ ಅಧಿಕಾರಿಗಳಿಗೆ ಸ್ಟಾಲಿನ್ ಸೂಚನೆ ನೀಡಿದ್ದಾರೆ.



Join Whatsapp