ಭಾರೀ ಮಳೆ: ಚಿಕ್ಕಮಗಳೂರು ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ

Prasthutha|

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆ‌ಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ.

- Advertisement -

ಈಗಾಗಲೇ ನದಿ‌‌‌ ತೀರ, ತಗ್ಗುಪ್ರದೇಶ ಸೇರಿದಂತೆ ಅಪಾಯಕಾರಿ ಸ್ಥಳಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್​ ಕೂಡ ನಿಷೇಧಿಸಲಾಗಿದೆ. ಮಳೆ ಕಡಿಮೆಯಾಗುವವರೆಗೂ ಪ್ರವಾಸ ಮುಂದೂಡಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಮನವಿ ಮಾಡಿದ್ದಾರೆ.

ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ವರುಣನ ಆರ್ಭಟ ಹೇಳತೀರದಾಗಿದೆ. ಈ ಹಿನ್ನಲೆ ಶೃಂಗೇರಿ, ಕೆರೆಕಟ್ಟೆ, ನೆಮ್ಮಾರು, ಕುದುರೆಮುಖ, ಕಳಸ, ಮೂಡಿಗೆರೆ, ಚಾರ್ಮಾಡಿ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.



Join Whatsapp