►ನಾಳೆಯೂ ಕೊಡಗು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ- ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಮಳೆ ಹಿನ್ನೆಲೆ ನಾಳೆ (09-07-2022) ರ ಶನಿವಾರ ಕೊಡಗಿನ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಮತ್ತೆ ಒಂದು ದಿನದ ರಜೆ ಮುಂದುವರೆಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.