ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೂ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

Prasthutha|

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

- Advertisement -


ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಪೂರ್ವ ಅರಬ್ಬೀ ಸಮುದ್ರದ ಲಕ್ಷದೀಪ ಪ್ರದೇಶದಲ್ಲಿ ಸರ್ಕ್ಯುಲೇಷನ್ ಇದೆ. ಇದರ ಪ್ರಭಾವದಿಂದ ಕರಾವಳಿಯಲ್ಲಿ ಆಗಸ್ಟ್ 21 ಹಾಗೂ 22 ರಂದು ಕೆಲವು ಕಡೆ ಮಾತ್ರ ಮಳೆಯಾಗಲಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡದ ಕೆಲವು ಕಡೆ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 23, 24, 25, 26 ಹಾಗೂ 27 ರಂದು ಭಾರೀ ಮಳೆ ಮುನ್ಸೂಚನೆ ಹಿನ್ನಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ.



Join Whatsapp