►ಪರಿಸ್ಥಿತಿ ಅವಲೋಕಿಸಿ ಶುಕ್ರವಾರ ಶಾಲೆಗಳಿಗೆ ರಜೆ ನೀಡುವ ಬಗ್ಗೆ ನಿರ್ಧಾರ
ಮಂಗಳೂರು: ಮುಂಜಾನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸುವುದು, ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ. ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ದ.ಕ. ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಮಳೆ ಮುಂದುವರಿದರೆ, ಶುಕ್ರವಾರ ಬೆಳಗ್ಗೆ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.