ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಒಟ್ಟು 112 ರಸ್ತೆಗಳು ಬಂದ್‌

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಆಗಿದ್ದು, 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಒಟ್ಟು 112 ರಸ್ತೆಗಳು ಬಂದ್‌ ಆಗಿವೆ. ಕೊಥಿ ಪ್ರದೇಶದಲ್ಲಿ ಅತ್ಯಧಿಕ 63 ಮಿ.ಮಿ. ಮಳೆಯಾಗಿದೆ.

- Advertisement -

ರಾಜ್ಯದ ಹಲವು ಭಾಗಗಳಲ್ಲಿ ಮಂಗಳವಾರ ಮಳೆ ಸುರಿದಿದ್ದು, ಕೆಲವು ಕಡೆಗಳಲ್ಲಿ ಹಿಮಪಾತವಾಗಿವೆ.

ಹವಾಮಾನ ಇಲಾಖೆ ರಾಜ್ಯದಲ್ಲಿ ಆರೇಂಜ್‌ ಅಲರ್ಟ್‌ ಘೋಷಿಸಿದೆ. ಮುಂದೆಯೂ ಭಾರಿ ಮಳೆಯಾಗಲಿದ್ದು, ಶುಕ್ರವಾರದಂದು ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಬೀಳಲಿದೆ ಎಂದು ಇಲಾಖೆ ಹೇಳಿದೆ. ಅಲ್ಲದೆ, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದೂ ಹವಾಮನಾ ಇಲಾಖೆ ಎಚ್ಚರಿಕೆ ನೀಡಿದೆ.



Join Whatsapp