ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ

Prasthutha|

ತಿರುವನಂತಪುರಂ: ಬಂಗಾಳಕೊಲ್ಲಿಯಲ್ಲಿನ ಆಳವಾದ ಕುಳಿಯು ಹಮೂನ್‌  ಚಂಡಮಾರುತವಾಗಿ ಬದಲಾಗಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೇರಳ ಹಾಗೂ ತಮಿಳುನಾಡಿನಲ್ಲಿ ಭಾರೀ ಮಳೆ ಹಾಗೂ ಗಾಳಿಯಾಗುತ್ತಿದೆ. ಕೇರಳ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿವೆ. ಕೇರಳದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಪಾಲಕ್ಕಾಡ್, ಇಡುಕ್ಕಿ, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾದ ಜಿಲ್ಲೆಗಳು.ಆ ಸ್ಥಳಗಳಲ್ಲಿ ಮಂಗಳವಾರ ಭಾರೀ ಮಳೆ, ಗುಡುಗು, ಮಿಂಚು ಮತ್ತು ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿತ್ತು.

- Advertisement -

ಹವಾಮಾನ ಇಲಾಖೆಯು ಯಾವುದೇ ಮುನ್ನೆಚ್ಚರಿಕೆ ನೀಡದ ಹೊರತಾಗಿಯೂ ತಿರುವನಂತಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಮಂಗಳವಾರ ನಿರಂತರ ಮಳೆಯಾಗಿದೆ.

ಚಂಡಮಾರುತವು ಅಕ್ಟೋಬರ್ 25 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಬಾಂಗ್ಲಾದೇಶ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಗಾಳಿಯ ವೇಗವು ಕ್ರಮೇಣವಾಗಿ ಗಂಟೆಗೆ 80-90 ಕಿಲೋಮೀಟರ್‌ಗೆ ಏರಿಕೆಯಾಗಲಿದ್ದು, ಮಂಗಳವಾರ ಬೆಳಿಗ್ಗೆ ಗಂಟೆಗೆ 100 ಕಿಮೀ ವೇಗಕ್ಕೆ ಏರಲಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

- Advertisement -

ಒಡಿಶಾದಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತವು ಒಡಿಶಾ ಕರಾವಳಿಯಿಂದ ಸುಮಾರು 200 ಕಿಮೀ ಸಮುದ್ರದ ಮೇಲೆ ಚಲಿಸಲಿದೆ ಎಂದು ಹವಾಮಾನ ವಿಜ್ಞಾನಿ ಯು ಎಸ್ ಡ್ಯಾಶ್ ಹೇಳಿದ್ದಾರೆ. ಇದರ ಪ್ರಭಾವದಿಂದ ಸೋಮವಾರ ಒಡಿಶಾದ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಇದು ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.



Join Whatsapp