ಕೊಡಗಿನಲ್ಲಿ ಭಾರೀ ಮಳೆ: ಹಲವು ಕುಟುಂಬಗಳ ಸ್ಥಳಾಂತರ

Prasthutha|

ಮೆಡಿಕೇರಿ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಕೊಡಗಿನ. ನದಿ, ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗುಡ್ಡಗಳು ಜರಿಯುತ್ತಿದ್ದು, ರಸ್ತೆಗಳು ಜಲಾವೃತಗೊಳ್ಳುತ್ತಿವೆ. ಅನೇಕ ಮನೆಗಳು ಕುಸಿದು ಬಿದ್ದಿವೆ. ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

- Advertisement -

ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಕಾರಣದಿಂದ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ 9 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಲ್ಲದೆ, ಇನ್ನೂ ಕೆಲವೆಡೆ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಭಾಗ ಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರು ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದೆ. ಅಕ್ಕಪಕ್ಕದ ಅಂಗಡಿಗಳು ಜಲಾವೃತಗೊಂಡಿವೆ.

- Advertisement -

ರಸ್ತೆ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜು ರಸ್ತೆಯಲ್ಲಿ ವಾಹನ ನಿರ್ಬಂಧಿಸಲಾಗಿದೆ.



Join Whatsapp