ಮಲೆನಾಡಿನಲ್ಲಿ ಧಾರಾಕಾರ ಮಳೆ; ಧರಾಶಾಹಿಯಾದ ಬೃಹತ್ ಮರ

Prasthutha|

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಧಾರಾಕಾರ ಗಾಳಿ ಮಳೆಯಾಗುತ್ತಿದ್ದು, ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಚಾರ್ಮಾಡಿ ಘಾಟ್ ನಲ್ಲಿ ಒಂದು ಗಂಟೆ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

- Advertisement -

ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಧರ್ಮಸ್ಥಳ – ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ರಸ್ತೆಯಲ್ಲಿ ರಸ್ತೆಗೆ ಮರ ಅಡ್ಡ ಬಿದ್ದ ಕಾರಣ ಸಂಚಾರ ಸ್ಥಗಿತಗೊಂಡಿತ್ತು. ಟ್ರಾಫಿಕ್ ಜಾಮ್ ನಲ್ಲಿ ಆಂಬುಲೆನ್ಸ್ ಕೂಡಾ ಬಾಕಿಯಾಗಿದ್ದು, ಚಿಕಿತ್ಸೆಗೆ ತೆರಳಬೇಕಾದವರು ಪರದಾಡಬೇಕಾದ ಸ್ಥಿತಿ ಉಂಟಾಗಿತ್ತು. ಆದರೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಮಲೆನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Join Whatsapp