ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ಚೆನ್ನೈ:  ತಮಿಳು ನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

- Advertisement -

ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ.

ಚೆನ್ನೈ, ತಿರುವಲ್ಲೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸತತ ಧಾರಾಕಾರ ಮಳೆಗೆ ಚೆನ್ನೈ ನಗರದ ಹಲವು ಕಡೆಗಳಲ್ಲಿ ಹಾನಿಯುಂಟಾಗಿದ್ದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕಳೆದ ರಾತ್ರಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Whatsapp