ಚೆನ್ನೈ: ತಮಿಳು ನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ.
ಚೆನ್ನೈ, ತಿರುವಲ್ಲೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸತತ ಧಾರಾಕಾರ ಮಳೆಗೆ ಚೆನ್ನೈ ನಗರದ ಹಲವು ಕಡೆಗಳಲ್ಲಿ ಹಾನಿಯುಂಟಾಗಿದ್ದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕಳೆದ ರಾತ್ರಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.