Home ಟಾಪ್ ಸುದ್ದಿಗಳು ತಮಿಳುನಾಡಿನಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ, ಶಾಲೆಗಳಿಗೆ ರಜೆ

ತಮಿಳುನಾಡಿನಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ, ಶಾಲೆಗಳಿಗೆ ರಜೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು ಪರಿಣಾಮ ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ.

ಚೆನ್ನೈ, ತಿರುವಲ್ಲೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಇಂದು (ಸೋಮವಾರ) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ. ಬೀಚ್ಗಳಿಗೆ ಜನರು ಭೇಟಿ ನೀಡಬಾರದು ಎಂದು ಗ್ರೇಟರ್ ಚೆನ್ನೈ ಪೊಲೀಸರು ಸೂಚಿಸಿದ್ದಾರೆ. ಬೀಚ್ ಗಳಿಗೆ ಜನರು ಭೇಟಿ ನೀಡಬಾರದು ಎಂದು ಗ್ರೇಟರ್ ಚೆನ್ನೈ ಪೊಲೀಸರು ಸೂಚಿಸಿದ್ದಾರೆ.

ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.4 ಮತ್ತು 5ರಂದು ಮನೆಯ ಒಳಗೇ ಇರುವಂತೆ ಐಎಂಡಿ ತಿಳಿಸಿದೆ. ಡಿ.3ರಿಂದ 7ರವರೆಗೆ ಸುಮಾರು 144 ರೈಲುಗಳ ಸೇವೆಯನ್ನು ರದ್ದಾಗಿವೆ. ಚೆನ್ನೈ ವಿಮಾನ ನಿಲ್ದಾಣದ ರನ್ ವೇ ಮೇಲೆ ಮಳೆನೀರು ನಿಂತ ಪರಿಣಾಮ ವಿಮಾನ ಸಂಚಾರ ಸ್ಥಗಿತವಾಗಿದೆ.

Join Whatsapp
Exit mobile version