ತುಮಕೂರು : ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ತಾಲೂಕಿನ ಕೋರಾ ಹೋಬಳಿ ವ್ಯಾಪ್ತಿಯ ವಿವಿಧ ಕೆರೆಗಳ ನೀರು ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯುತ್ತಿದ್ದು, ಹೆದ್ದಾರಿಯ ಒಂದು ಬದಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ರಾತ್ರಿಯಿಡೀ ಸುರಿ ಮಳೆಯಿಂದಾಗಿ, ತುಮಕೂರು ತಾಲೂಕಿನ ಅಂಚಿಹಳ್ಳಿ ಗ್ರಾಮದಲ್ಲಿ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಕೆರೆಯು ಮಳೆಯಿಂದಾಗಿ ಪೂರ್ತಿ ತುಂಬಿದ್ದು, ಕೆರೆ ನೀರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಗ್ರಹವಾಗಿದೆ.
ಹೆದ್ದಾರಿ ನದಿಯಂತಾಗಿದ್ದು, ವಾಹನಸಂಚಾರ ನಿಷೇಧಿಸಲಾಗಿದೆ. ಸಂಗ್ರಹವಾಗಿರುವ ನೀರು ಹರಿದು ಹೋಗವಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.