ಮುಂದಿನ ಎರಡು ದಿನಗಳಲ್ಲಿ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಚುರುಕು

Prasthutha|

ಬೆಂಗಳೂರು: ಕಳೆದ ಎರಡು ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಮುಂದಿನ ಎರಡ್ಮೂರು ದಿನಗಳಲ್ಲಿ ಮಳೆ ಮತ್ತೆ ಚುರುಕು ಪಡೆಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -


ಗುರುವಾರ ಹಾಗೂ ಶುಕ್ರವಾರ ಕರಾವಳಿಯ ಮೂರು ಜಿಲ್ಲೆಗಳ ಜತೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗೂ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಜುಲೈ 19ರವರೆಗೂ ರಾಜ್ಯದಲ್ಲಿ ಉತ್ತಮ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಳಿಮುಖವಾದ ಕಾರಣ ಕೆಆರ್ಎಸ್, ಕಬಿನಿ, ಹಾರಂಗಿ ಜಲಾಶಯಗಳಿಗೆ ಒಳಹರಿವು ಸಹ ಕಡಿಮೆ ಆಗಿದೆ.