ಕೇರಳದಲ್ಲಿ ಭಾರಿ ಮಳೆ, ಭೂ ಕುಸಿತ: ಕೇರಳ ಸಿಎಂಗೆ ನೆರವಿನ ಭರವಸೆ ನೀಡಿದ ಮುಖ್ಯಮಂತ್ರಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತ ದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

- Advertisement -


ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.


ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.



Join Whatsapp