ಕೊಡಗಿನಲ್ಲಿ 2 ದಿನ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

Prasthutha|

ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಮತ್ತೆರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಹಲವೆಡೆ ರಸ್ತೆಗಳಲ್ಲಿ ನೀರು ಕಾಲುವೆಯಂತೆ ಹರಿಯುತ್ತಿದೆ. ಮನೆಗಳು ಕುಸಿಯುತ್ತಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ.

- Advertisement -


ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ನದಿಗೆ 27,500 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ನದಿದಂಡೆಯ ನಿವಾಸಿಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.



Join Whatsapp