Home ಟಾಪ್ ಸುದ್ದಿಗಳು ಕೊಡಗಿನಲ್ಲಿ 2 ದಿನ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಕೊಡಗಿನಲ್ಲಿ 2 ದಿನ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಸಾಂದರ್ಭಿಕ ಚಿತ್ರ

ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಮತ್ತೆರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಹಲವೆಡೆ ರಸ್ತೆಗಳಲ್ಲಿ ನೀರು ಕಾಲುವೆಯಂತೆ ಹರಿಯುತ್ತಿದೆ. ಮನೆಗಳು ಕುಸಿಯುತ್ತಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ.


ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ನದಿಗೆ 27,500 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ನದಿದಂಡೆಯ ನಿವಾಸಿಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

Join Whatsapp
Exit mobile version