ರಿಯಾದ್: ಸೌದಿ ಅರೇಬಿಯಾದ ಹಲವು ಕಡೆಗಳಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತವಾಗಿದೆ.
- Advertisement -
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹವಾಮಾನ ಇಲಾಖೆ(NCM) ರೆಡ್ ಅಲರ್ಟ್ ಘೋಷಿಸಿದೆ.
ಮಕ್ಕಾ, ಮದೀನಾ, ಜಿದ್ದಾ ಸೇರಿದಂತೆ ಹಲವು ನಗರಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.