Home ಟಾಪ್ ಸುದ್ದಿಗಳು ಕೇರಳದ ಹಲವೆಡೆ ಭಾರಿ ಮಳೆ: 2 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಕೇರಳದ ಹಲವೆಡೆ ಭಾರಿ ಮಳೆ: 2 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಸಾಂದರ್ಭಿಕ ಚಿತ್ರ

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಮಂಗಳವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ.


ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.


ಬುಧವಾರ ಎರ್ನಾಕುಲಂ ಮತ್ತು ತ್ರಿಶೂರ್ನಲ್ಲಿ, ಗುರುವಾರ ಇಡುಕ್ಕಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.


ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚು ಜಾಗರೂಕರಾಗಿ ಇರಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Join Whatsapp
Exit mobile version