Home ಟಾಪ್ ಸುದ್ದಿಗಳು ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ

ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ

ಮಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುತ್ತಿದ್ದು, ಶನಿವಾರವೂ ಮುಂದುವರಿದಿದೆ. ಮಧ್ಯಾಹ್ನದ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಬ್ರಮಣ್ಯ ಸೇರಿ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

ವಿಜಯಪುರ, ಚಿಕ್ಕಮಗಳೂರು ವಿವಿಧ ಭಾಗಗಳಲ್ಲಿ ಮಳೆಯಾಗಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಭಾರಿ ಮಳೆ ಸುರಿಯಿತು. ಚಿಕ್ಕಮಗಳೂರಿನಲ್ಲಿ ಕೂಡ ಬಿರುಗಾಳಿ ಸಮೇತ ಧಾರಾಕಾರ ಮಳೆ ಆರಂಭವಾಗಿದೆ. 


ಇನ್ನೂ ಮೂರ್ನಾಲ್ಕು ದಿನ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Whatsapp
Exit mobile version