Home ಟಾಪ್ ಸುದ್ದಿಗಳು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಜಲಾವೃತ

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶದಲ್ಲಿ ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹ ಗೊಂಡು ವಾಹನ ಸವಾರರು ಪರದಾಡಿದರು.

ನದಿಗಳು ತುಂಬಿ ಹರಿಯುತ್ತಿದ್ದು ನೆರೆ ಸ್ಥಿತಿ ಏರ್ಪಟ್ಟಿದೆ. ಉಡುಪಿ ಜಿಲ್ಲಾಡಳಿತ ಶಾಲಾ-ಕಾಲೇಜಿಗೆ ರಜೆ ಘೋಷಿಸಿಲ್ಲ. ಆದರೆ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಹಲವು ಶಾಲಾ-ಕಾಲೇಜು ರಜೆ ಘೋಷಿಸಿದೆ.

Join Whatsapp
Exit mobile version