ಕರಾವಳಿಯಲ್ಲಿ ಮುಂದಿನ 7 ದಿನ ಮಳೆ ಸಾಧ್ಯತೆ

Prasthutha|

ಬೆಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮುಂದಿನ ಒಂದು ವಾರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

- Advertisement -


ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

- Advertisement -


ಸಿಲಿಕಾನ್ ಸಿಟಿ ಬೆಂಗಳೂರು ನಗರ ಸೇರಿದಂತೆ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದೆ.


ಉಳಿದಂತೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ, ಒಳನಾಡಿನ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ಗುಡುಗು-ಸಹಿತ ಧಾರಾಕಾರ ಮಳೆಯಾಗಲಿದೆ.



Join Whatsapp
Exit mobile version