ಮುಂದಿನ ಐದು ದಿನ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

Prasthutha|

ಮಂಗಳೂರು: ಮುಂದಿನ ಐದು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಖ್ಯವಾಗಿ ಪೆನಿನ್ಸುಲರ್ ಮತ್ತು ಈಶಾನ್ಯ ಭಾರತವನ್ನು ಒಳಗೊಂಡಿರುವ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಭಾರತದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದ್ದು, ಅಕ್ಟೋಬರ್ 11 ರವರೆಗೆ ಗಂಟೆಗೆ 35-45 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು ಮತ್ತು ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ ಎಂದು IMD ತಿಳಿಸಿದೆ.



Join Whatsapp