ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

Prasthutha|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಸೇರಿ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

Join Whatsapp