ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ

Prasthutha|

ಬೆಂಗಳೂರು: ಮುಂದಿನ ಒಂದು ವಾರ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Join Whatsapp
Exit mobile version