ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ: ಆ.6 ರವರೆಗೆ ರೆಡ್ ಅಲರ್ಟ್

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗುತ್ತಿದ್ದು, ಆಗಸ್ಟ್ 6 ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ.

- Advertisement -


ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಭಾರಿ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಮೈಸೂರು–ಮಂಗಳೂರು ಹೆದ್ದಾರಿ ಬಂದ್ ಆಗಿದೆ.

- Advertisement -


ಸುಳ್ಯ ತಾಲ್ಲೂಕಿನ ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.



Join Whatsapp