Home ಕರಾವಳಿ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ: ಆ.6 ರವರೆಗೆ ರೆಡ್ ಅಲರ್ಟ್

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ: ಆ.6 ರವರೆಗೆ ರೆಡ್ ಅಲರ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗುತ್ತಿದ್ದು, ಆಗಸ್ಟ್ 6 ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ.


ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಭಾರಿ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಮೈಸೂರು–ಮಂಗಳೂರು ಹೆದ್ದಾರಿ ಬಂದ್ ಆಗಿದೆ.


ಸುಳ್ಯ ತಾಲ್ಲೂಕಿನ ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.

Join Whatsapp
Exit mobile version