ಬೆಂಗಳೂರು: ನವೆಂಬರ್ 4ರಿಂದ 8ರವರೆಗೂ ಭಾರೀ ಮಳೆ ಮುನ್ಸೂಚನೆ ಲಭಿಸಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಇನ್ನಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಈಶಾನ್ಯ ಮಾನ್ಸೂನ್ ಅನ್ನು ನಿರೂಪಿಸುವ ಬಂಗಾಳಕೊಲ್ಲಿಯಿಂದ ಮತ್ತು ದಕ್ಷಿಣ ಪೆನಿನ್ಸುಲರ್ ಭಾರತದ ಕಡೆಗೆ ಬೀಸುತ್ತಿರುವ ಪೂರ್ವ-ಈಶಾನ್ಯ ಮಾರುತಗಳು ಮುಂದಿನ ದಿನಗಳಲ್ಲಿ ಬಲಗೊಳ್ಳುವ ನಿರೀಕ್ಷೆಯಿದೆ. ಇದರಿಂದಾಗ ನವೆಂಬರ್ 2-8 ರವರೆಗೆ ದಕ್ಷಿಣ ಪೆನಿನ್ಸುಲಾರ್ ಭಾರತದಾದ್ಯಂತ ಲಘು/ಮಧ್ಯಮ ತೀವ್ರತೆಯ ಸಾಕಷ್ಟು ವ್ಯಾಪಕ ಮಳೆಯನ್ನು ನಿರೀಕ್ಷಿಸಲಾಗಿದೆ.