ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ: ನಾಳೆಯೂ ರೆಡ್ ಅಲರ್ಟ್ !

Prasthutha|

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ (ಆ.7) ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

- Advertisement -


ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನಾಳೆ ರೆಡ್ ಅಲರ್ಟ್ ಇರಲಿದೆ.


ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಆಗಸ್ಟ್ 6ರ ಬೆಳಗ್ಗೆವರೆಗೆ ರೆಡ್ ಅಲರ್ಟ್ ಘೋಷಿಸಿತ್ತು. ಆದರೆ ಇದೀಗ ನಾಳೆಯೂ ಮಳೆ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆಯೆಂದು ಹವಮಾನ ಇಲಾಖೆ ಘೋಷಿಸಿದ್ದು, ಈ ಜಿಲ್ಲೆಗಳಲ್ಲಿ ಭಾನುವಾರವೂ ರೆಡ್ ಅಲರ್ಟ್ ಮುಂದುವರಿಯಲಿದೆ.

Join Whatsapp