Home ಟಾಪ್ ಸುದ್ದಿಗಳು ಕರ್ನಾಟಕದ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಸುರಿಯಲಿದೆ ಭಾರಿ ಮಳೆ, ಯೆಲ್ಲೋ ಅಲರ್ಟ್

ಕರ್ನಾಟಕದ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಸುರಿಯಲಿದೆ ಭಾರಿ ಮಳೆ, ಯೆಲ್ಲೋ ಅಲರ್ಟ್

0

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕ್ಯಾಸಲ್​​ರಾಕ್, ಮೂಡುಬಿದಿರೆ, ಗೇರುಸೊಪ್ಪ, ಹೊನ್ನಾವರ, ಚಿಂಚೋಳಿ, ಬೀದರ್, ಸೋಮವಾರಪೇಟೆ, ಆಗುಂಬೆ, ಭಾಗಮಂಡಲ, ಕೊಟ್ಟಿಗೆಹಾರ, ಶೃಂಗೇರಿ, ಲೋಂಡಾ, ಕಲಬುರಗಿ, ಮಂಠಾಳ, ಹುಮ್ನಾಬಾದ್, ಭಾಲ್ಕಿ, ಪುತ್ತೂರು, ಕೋಟಾ, ಮಂಗಳೂರು, ಸಿದ್ದಾಪುರ, ಕದ್ರಾ, ಉಡುಪಿ, ಮಂಕಿ, ಯಲ್ಲಾಪುರ, ಬೆಳ್ತಂಗಡಿ, ಸುಳ್ಯ, ಅಡಕಿ, ನಿಪ್ಪಾಣಿ, ಸಂಕೇಶ್ವರ, ಕಮ್ಮರಡಿ, ಜಯಪುರ, ಕಳಸದಲ್ಲಿ ಮಳೆಯಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version