ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆ.22ರಿಂದ ಆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.22ರಿಂದ ಆ.24ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಕೋಲಾರದಲ್ಲಿ ಆ.23ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.