Home ಟಾಪ್ ಸುದ್ದಿಗಳು ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.


ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 2ರವರೆಗೂ ವರ್ಷಧಾರೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಬೆಳಗಾವಿ, ಗದಗ, ಬೆಂಗಳೂರು, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Join Whatsapp
Exit mobile version